ಕಲ್ಮಡ್ಕ : ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ

0


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸಪ್ತಶ್ರೀ ಗೊಂಚಲು ಸಮಿತಿ, ಕಲ್ಮಡ್ಕ ಗ್ರಾಮ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಶನ ಪಡ್ಪಿನಂಗಡಿ ಶಿವ ಗೌರಿ ಕಲಾಮಂದಿರದಲ್ಲಿ ಸೆಪ್ಟೆಂಬರ್ ೧೯ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಪ್ತಶ್ರೀ ಗೊಂಚಲು ಸಮಿತಿಯ ಅಧ್ಯಕ್ಷ ರಾದ ಶ್ರೀಮತಿ ಭವಾನಿ ಆಕ್ರಿಕಟ್ಟೆ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಲೋಕೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದು, ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರೇಣುಕಾ ಪಂಬೆತ್ತಾಡಿ ಆರೋಗ್ಯ ಮತ್ತು ಪೌಷ್ಟಿಕಾಂಶದ ಬಗ್ಗೆ ಮಾಹಿತಿ ನೀಡಿದರು.


ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಶಾನ ,ಎಸ್.ಎಸ್ ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ೮೯% ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪೌಷ್ಟಿಕ ಆಹಾರಗಳ ಸಪ್ತಾಹದ ಅಂಗವಾಗಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಾನೀಯ ವಿವಿಧ ಪೌಷ್ಟಿಕ ಆಹಾರಗಳನ್ನು ಹಾಗೂ ಸ್ಥಳೀಯವಾಗಿ ಲಭ್ಯವಿರುವ ವಿವಿಧ ತಿನಿಸುಗಳನ್ನು ತಯಾರಿಸಿದ್ದರು. ಪೌಷ್ಟಿಕ ಆಹಾರಗಳ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಪಂಚಾಯತ್ ಸದಸ್ಯರಾದ ಶ್ರೀಮತಿ ಹಾಜೀರ ಗಫೂರ್ ಮತ್ತು ಶ್ರೀಮತಿ ಮೀನಾಕ್ಷಿ , ಸಂಘದ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ವಲಯದ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ದೇವಿಕಾ ಕಲ್ಮಡ್ಕ ಪ್ರಾರ್ಥಿಸಿದರು. ಗೊಂಚಲಿನ ಮಾಜಿ ಕಾರ್ಯದರ್ಶಿ ಯಾದ ಶ್ರೀಮತಿ ಕಮಲ ನಡ್ಕ ಸ್ವಾಗತಿಸಿದರು. ಗೊಂಚಲಿನ ಕಾರ್ಯದರ್ಶಿ ಶ್ರೀಮತಿ ಮಮತಾ ಕಾಪಡ್ಕ ವಂದಿಸಿದರು. ಶ್ರೀಮತಿ ಧನ್ಯ ಆಕ್ರೀಕಟ್ಟೆ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷಾ ಧಿಕಾರಿ ಶ್ರೀಮತಿ ರೇಣುಕಾ, ಶ್ರೀಮತಿ ಪವಿತ್ರ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಸೌಮ್ಯ ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು ಮತ್ತು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೀಲಾವತಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಮಕ್ಕಳ ತಾಯಂದಿರು, ಗರ್ಭಿಣಿಯರು ಹಾಜರಿದ್ದು ಸಹಕರಿಸಿದರು.