ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ನೀಡಲು ಸರಕಾರದಿಂದ ಆದೇಶ

0

2025-26ನೇ ಸಾಲಿನಲ್ಲಿ 984 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಸರಕಾರವು ಆದೇಶಿಸಿದೆ. ಅದರಂತೆ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸುಮಾರು 119 ವರ್ಷಗಳ ಇತಿಹಾಸ ಇರುವ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನುಮತಿ ನೀಡಲಾಗಿದೆ.
ಈ ದ್ವಿಭಾಷಾ ಮಾಧ್ಯಮ ಶಿಕ್ಷಣವನ್ನು ಐವರ್ನಾಡು ಶಾಲೆಗೆ ಮಂಜೂರು ಮಾಡಿಸುವಲ್ಲಿ ಶಾಲಾ ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷ ಹೊನ್ನಪ್ಪ ಉದ್ದಂಪಾಡಿ ಹಾಗೂ ಸದಸ್ಯರ ಬೇಡಿಕೆಗೆ ಸ್ಪಂದಿಸಿ ಪ್ರಯತ್ನಿಸಿದ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್‌ ಮಡ್ತಿಲರವರು ಇದಕ್ಕಾಗಿ ಸಹಕರಿಸಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಪಿ.ಸಿ. ಜಯರಾಮ್‌ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಸ್.‌ ಗಂಗಾಧರ್‌, ದ.ಕ.ಜಿಲ್ಲಾ, ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್‌, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.