ಅಜ್ಜಾವರ ಪೇಟೆಯಲ್ಲಿರುವ ದಿನಸಿ ಅಂಗಡಿ ಮಾಲಕರಾದ ಮಹಮ್ಮದ್ ರಫೀಕ್ ಎಸ್ ಡಿ ರವರ ಅಡಿಕೆ ಗೋಡಾನ್‌ನಿಂದ ಅಡಿಕೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
ಸೆ.12 ರಂದು ರಾತ್ರಿ ಅಡಿಕೆಯನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ:103/2025 ಕಲಂ 331(4) 305(ಎ) 3(5) ಬಿಎನ್‌ಎಸ್-2023 ರಂತೆ ಪ್ರಕರಣ ದಾಖಲಿಸಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಸುಳ್ಯ ಪೊಲೀಸರು ಪ್ರಕರಣದ ಆರೋಪಿಗಳಾದ ಸುಪ್ರಿತ್ ಕೆ(22) ಮಂಡೆಕೋಲು ಗ್ರಾಮ ಹಾಗೂ ಮಹಮ್ಮದ್ ಸಿನಾನ್(21ವರ್ಷ) ಜಾಲ್ಸೂರು ಗ್ರಾಮ
ಇವರುಗಳನ್ನ ಸೆ.19 ರಂದು ಮುರೂರು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ.















ಈ ವೇಳೆ ಆರೋಪಿಗಳು ಕಳವು ಮಾಡಿದ 1 ಕ್ವಿಂಟಲ್ ಸುಲಿದ ಅಡಿಕೆ ಸಾಗಾಟ ಮಾಡಲು ಉಪಯೋಗಿಸಿರುವ ಕೆಎ 21 ಸಿ 5862ನೇ ನಂಬ್ರದ ಆಟೋ ರಿಕ್ಷಾವನ್ನು ಸ್ವಾದೀನಪಡಿಸಿಕೊಂಡು ಆರೊಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.










