














ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ವಾರ್ಷಿಕ ಮಹಾ ಸಭೆಯು ಸೆ.20 ನಡೆಯಿತು. ಸಭೆಯಲ್ಲಿ ತಾಲೂಕು ಮಟ್ಟದ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಗೆ ಪ್ರಶಸ್ತಿ ಪ್ರದಾನ ನಡೆಯಿತು. ಈ ಸಂದರ್ಭದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಹಿತೇಶ್ ಪಂಜದಬೈಲು, ಕಾರ್ಯದರ್ಶಿ ಶಶಿದಾಸ್ ನಾಗತೀರ್ಥ, ಯುವಜನ ಸಂಯುಕ್ತ ಮಂಡಳಿ ನೂತನ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ನಿರ್ದೇಶಕ ಜನಾರ್ಧನ ನಾಗತೀರ್ಥ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.










