ಐನೆಕಿದು: ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಗ್ಗೆ ಮಾಹಿತಿ ಕಾರ್ಯಾಗಾರ

0

ಸ. ಹಿ. ಪ್ರಾ.ಶಾಲೆ ಐನೆಕಿದು ಇಲ್ಲಿ ಸೆ.13 ರಂದು ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವಕ್ತಿಯಾಗಿ ನಿವೃತ ಪ್ರಾಂಶುಪಾಲರಾ ಅಶೋಕ್ ಕುಮಾರ್ ಮೂಲೆಮಜಲು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಶ್ರೀಮತಿ ವಿದ್ಯಾಕುಮಾರಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಆರೋಗ್ಯ ಇಲಾಖೆ ಐನೆಕಿದು ಉಪಕೇಂದ್ರ ದ ಸಿ. ಹೆಚ್. ಓ. ಶ್ರೀಮತಿ ಶಾಂತಮ್ಮ, ಐನೆಕಿದು ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಕುಮಾರಿ ಕೆ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಕಾರ್ಯಾಗಾರದಲ್ಲಿ ಶಾಲಾ ಪೋಷಕರು, ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.