ಬೆಂಗಳೂರಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿ ಸಭೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿ ಸಭೆ ಸೆ. 17ರಂದು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರ ಕಚೇರಿಯಲ್ಲಿ ನಡೆಯಿತು.


ಸಭೆಯಲ್ಲಿ ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ, ಹಿಂದೂ ಧಾರ್ಮಿಕ ದತ್ತಿ ಸಚಿವ ಆರ್. ರಾಮಲಿಂಗ ರೆಡ್ಡಿ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಕೆ. ವೆಂಕಟೇಶ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ. ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರಾದ ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಡಾ. ರಘು ಬಿ, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣಾ ಪ್ರಶಾಂತ್ ಮರುವಂಜ, ಶ್ರೀಮತಿ ಸೌಮ್ಯ ಭರತ್, ಅಜಿತ್ ಕುಮಾರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳಾದ ವಿವಿಧ ಇಲಾಖೆಗಳ ಅಧಿಕಾರಿಗಳು, ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅಯ್ಯಪ್ಪ ಸುತಗುಂಡಿ, ಇಂಜಿನಿಯರ್ ಉದಯಕುಮಾರ್, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ, ಅಚ್ಚುತ್ತ ಗೌಡ, ಪವನ್, ಧಾರ್ಮಿಕ ಪರಿಷತ್ ಸದಸ್ಯರಾದ ರವಿಕಿರಣ್ ಶೆಟ್ಟಿ ಮತ್ತು ಮಲ್ಲಿಕಾ ಪಕಳ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.