














ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇಲ್ಲಿ ಜಿಲ್ಲಾ ನಿರೂಪಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರಿಗೆ ಜಿಲ್ಲಾ ಮಕ್ಕಳ ರಕ್ಷಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದಾರೆ.
ಸುಬ್ರಹ್ಮಣ್ಯ ತಾ.ಪಂ.ಕ್ಷೇತ್ರದ ನಿಕಟಪೂರ್ವ ಸದಸ್ಯ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ.ಸಮಿತಿ ಸದಸ್ಯರಾಗಿರುವ ಅಶೋಕ್ ನೆಕ್ರಾಜೆಯವರ ಪತ್ನಿಯಾಗಿರುವ ಇವರು ಕಳೆದ 3.5 ವರ್ಷಗಳ ಹಿಂದೆ ಸುಳ್ಯದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ನಿರೂಪಣಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು.



