ಬಾಲಕರ ತಂಡ ತಾಲೂಕು ಮಟ್ಟದಲ್ಲಿ ದ್ವಿತೀಯ.















ಸುಳ್ಯ ಜೂನಿಯರ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಪ್ರಥಮ ಸ್ಥಾನ ಪಡೆದು ಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಸುರೇಶ್ ವಾಗ್ಲೆ ಸರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಶಾಂತಿ ಎ ಕೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಜಯರಾಮ ಪಿ ಪಿ ತರಬೇತಿ ನೀಡಿರುತ್ತಾರೆ. ಶಿಕ್ಷಣಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದ್ದಾರೆ.










