ಸುಳ್ಯ ವಕೀಲರ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.೨೦ರಂದು ಸುಳ್ಯದ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿಯವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಜಗದೀಶ್ ವಾರ್ಷಿಕ ವರದಿ ವವಾಚಿಸಿದರೆ, ಲೆಕ್ಕಪತ್ರವನ್ನು ಕೋಶಾಧಿಕಾರಿ ಹರ್ಷಿತ್ ಮಂಡಿಸಿದರು.

ಸನ್ಮಾನ : ಮಹಾಸಭೆಯ ಬಳಿಕ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಮೋಹನ್ ಬಾಬು ಆಗಮಿಸಿದ್ದರು. ದ.ಕ. ಜಿಲ್ಲಾ ಬಾರ್ ಅಸೋಸಿಯೇಶನ್ ಇದರ ಅಧ್ಯಕ್ಷರಾಗಿ ಆಯ್ಕೆಯಾಗಿ ಸುಳ್ಯಕ್ಕೆ ಪ್ರಥಮ ಭೇಟಿ ನೀಡಿದ ರಿಚರ್ಡ್ ಕೋಸ್ತ ಮತ್ತು ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿಯವರನ್ನು ಸುಳ್ಯ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.















ಸುಳ್ಯ ವಕೀಲರ ಸಂಘದ ಅನೇಕ ಹಿರಿಯ ವಕೀಲರುಗಳು ತಮ್ಮ ವೃತ್ತಿ ಜೀವನದಲ್ಲಿ ನಿರಂತರ ಸೇವೆಯೊಂದಿಗೆ ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂಚೂಣಿಯಲ್ಲಿರುವ ವಕೀಲರುಗಳನ್ನು ಶಾಲು ಹೊದಿಸಿ, ಗೌರವ ಫಲಕ ನೀಡಿ ಸನ್ಮಾನಿಸಲಾಯಿತು.
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಎಂ. ವೆಂಕಪ್ಪ ಗೌಡ, ಮುರುಳ್ಯ ಪೂದೆ ಶ್ರೀ ಗಣಪತಿ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜಗದೀಶ ಹುದೇರಿ, ಮಡಪ್ಪಾಡಿ ಸಹಕಾರ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾದ ಧರ್ಮಪಾಲ ಕೊಯಿಂಗಾಜೆ, ಕ್ರೈಸ್ತ ಸಮುದಾಯ ಸಹಕಾರಿ ಸಂಘದ ನಿರ್ದೇಶಕರಾಗಿರುವ ಶ್ರೀಮತಿ ಸುನಿತಾ ಎಂ ಡಿ ಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಅಡ್ಕಾರು, ಬಳ್ಪ ಗ್ರಾಮ ಪಂಚಾಯತು ಅಧ್ಯಕ್ಷರಾದ ಹರ್ಷಿತ್ ಕೆ, ಕೊಲ್ಲಮೊಗ್ರ ಗ್ರಾಮ ಪಂಚಾಯತು ಸದಸ್ಯರಾದ ಬಾಲಸುಬ್ರಹ್ಮಣ್ಯ ಭಟ್, ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದಿಲೀಪ್ ಬಾಬ್ಲುಬೆಟ್ಟು, ಸುಳ್ಯದ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೀಪಕ್ ಕುತ್ತಮೊಟ್ಟೆ ಇವರನ್ನು ಸುಳ್ಯದ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಬಾರ್ ಅಸೋಸಿಯೇಶನ್ ಇದರ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ಸನ್ಮಾನಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇದರ ಸಂಚಾರಿ ಪೀಠವನ್ನು ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ಸ್ಥಾಪಿಸುವ ಬಗ್ಗೆ ಈಗಾಗಲೇ ನಡೆಯುತ್ತಿರುವ ಹೋರಾಟದ ಮಾಹಿತಿಯನ್ನು ಜಿಲ್ಲಾಧ್ಯಕ್ಷರು ತಿಳಿಸಿದರು. ಜಗದೀಶ್ ಡಿ.ಪಿ. ವಂದಿಸಿದರು.










