ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ಸ್ವಸ್ಥ ನಾರಿ, ಸಶಕ್ತ ಪರಿವಾರ” ಅರೋಗ್ಯ ಅಭಿಯಾನ

0

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವತಿಯಿಂದ ದೇಶವ್ಯಾಪಿ ಆರೋಗ್ಯ ಅಭಿಯಾನ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನವನ್ನು ಸೆ. 17ರಿಂದ ಅ. 2ರವರೆಗೆ ಆಯೋಜಿಸಲಾಗಿದ್ದು, ಅಭಿಯಾನದ ಅಂಗವಾಗಿ ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿತ್ತು. ಸೆ.20ರಂದು ಉದ್ಘಾಟನೆಗೊಂಡ ಕಾರ್ಯಕ್ರಮದಲ್ಲಿ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಅಪೂರ್ವ ದೊರೆ ಕಾರ್ಯಕ್ರಮದ ಕುರಿತಾದ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ. ಆರ್. ಭಟ್, ಪೆತಾಲಜಿ ವಿಭಾಗದ ಪ್ರೊಫೆಸರ್ ಡಾ. ನವ್ಯ ಬಿ, ಫಿಸಿಯೋತೆರಪಿ ವಿಭಾಗದ ಪ್ರಾಂಶುಪಾಲ ಡಾ‌. ಮನೀಶ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಚಂದ್ರಾವತಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಶಿಬಿರದ ವಿಶೇಷ ತೆಗಳು

ಅ. 2ರ ತನಕ‌ ನಡೆಯಲಿರುವ ಈ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ತಪಾಸಣೆ ಶಿಬಿರಗಳು, ಮಹಿಳೆಯರ ಮಾಸಿಕ ಸ್ವಚ್ಛತೆ ಕುರಿತು ಜಾಗೃತಿ ಬೋಧನೆ, ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ, ರಕ್ತದಾನ ಶಿಬಿರ, ಆರೋಗ್ಯಕರ ಆಹಾರ ಮತ್ತು ಪೋಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ