ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕದಿರು ವಿನಿಯೋಗ – ನವಾನ್ನ ಭೋಜನ

0

ಜಾಲ್ಸೂರಿನ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸೆ. 23 ರಂದು ಬೆಳಿಗ್ಗೆ ಕದಿರು ವಿನಿಯೋಗ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಂತರ ನವಾನ್ನ ಭೋಜನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಉತ್ಸವ ಸಮಿತಿ ಅಧ್ಯಕ್ಷ ಗಣೇಶ್ ರೈ ಕುಕ್ಕಂದೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್,ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರ್, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಯ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ದೇವಸ್ಥಾನದಲ್ಲಿ ಸೆ. 26 ರಂದು ಶ್ರೀ ದುರ್ಗಾ ತ್ರಿಕಾಲ ಪೂಜೆ, ಸೆ.28 ರಂದು ಶುಕ್ಲ ಪಕ್ಷದ ಷಷ್ಠಿ ಕಾರ್ಯಕ್ರಮ, ಅ. 1 ರಂದು ವಿಶೇಷ ಆಯುಧ ಪೂಜೆ ನಡೆಯಲಿದೆ.