ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ಶಿಬಿರ

0

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವತಿಯಿಂದ ದೇಶವ್ಯಾಪಿ ಸ್ವಸ್ಥ ನಾರಿ, ಸಶಕ್ತ ಪರಿವಾರ ಅರೋಗ್ಯ ಅಭಿಯಾನದ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಎನ್. ಎಸ್. ಎಸ್ ಘಟಕದ ವತಿಯಿಂದ ಸೆ. 23ರಂದು ಆಯೋಜಿಸಲಾಯಿತು.

ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ ಚಿದಾನಂದರು ಮಾತನಾಡುತ್ತಾ “ರಕ್ತದಾನವು ಮಹಾದಾನ. ನಿಯಮಿತ ರಕ್ತದಾನದ ಮೂಲಕ ಜೀವ ಉಳಿಸಬಹುದು ಎಂದರು. ಸಂಸ್ಥೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ. ರಾಮಚಂದ್ರ ಭಟ್, ಪೆತಾಲಜಿ ವಿಭಾಗ ಮುಖ್ಯಸ್ಥ ಪ್ರೊ. ಡಾ. ಸತ್ಯವತಿ ಆರ್. ಆಳ್ವ, ಬ್ಲಡ್ ಬ್ಯಾಂಕ್ ಆಫೀಸರ್ ಪ್ರೊ. ಡಾ. ನವ್ಯ ಹಾಗೂ ಡಾ. ಅಂಜಲಿ, ಕಮ್ಯೂನಿಟಿ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಅಪೂರ್ವ ದೊರೆ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.