ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಕರ್ತರ ಮಾಹಿತಿ ಪತ್ರ ಬಿಡುಗಡೆ

0

ಪತ್ರಕರ್ತರು ಅಪ್‌ಡೇಟ್ ಆಗಬೇಕು :ಡಾ.ಉಜ್ವಲ್ ಯು.ಜೆ

ಪದಾಧಿಕಾರಿಗಳು ಕ್ರಿಯಾಶೀಲರಾದರೆ ಸಂಘಟನೆ ಬಲಿಷ್ಠ-ಶ್ರೀನಿವಾಸ ನಾಯಕ್ ಇಂದಾಜೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರೆಸ್ ಕ್ಲಬ್‌‌ನಲ್ಲಿ ನಡೆಯಿತು. ಪದಗ್ರಹಣ ನೆರವೇರಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಪದಾಧಿಕಾರಿಗಳು ಸದಸ್ಯರು ಕ್ರಿಯಾಶೀಲರಾಗಿದ್ದರೆ ಸಂಘಟನೆಗಳು ಬಲಿಷ್ಠವಾಗುತ್ತದೆ.ಜಿಲ್ಲೆಯ ಹಾಗೂ ಎಲ್ಲಾ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಕ್ರಿಯಾಶೀಲರಾಗಿರುವ ಕಾರಣ ಜಿಲ್ಲೆಯ ಸಂಘಕ್ಕೆ ರಾಜ್ಯದಲ್ಲಿಯೇ ಉತ್ತಮ ಹೆಸರಿದೆ ಎಂದರು. ಸುಳ್ಯ ತಾಲೂಕು‌ ಕಾರ್ಯನಿರತ ಪತ್ರಕರ್ತರ ಸಂಘ ಇನ್ನಷ್ಟು ಕ್ರಿಯಾಶೀಲವಾಗಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರೆ.


ಪತ್ರಕರ್ತರ ಮಾಹಿತಿ ಪತ್ರ ಬಿಡುಗಡೆ ಮಾಡಿದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದ ಎಕ್ಸಿಕ್ಯೂಟಿವ್ ಕಮಿಟಿ ಸದಸ್ಯರಾದ ಡಾ.ಉಜ್ವಲ್ ಯು.ಜೆ. ಮಾತನಾಡಿ ಸತ್ಯ ಮತ್ತು ಪ್ರಾಮಾಣಿಕವಾಗಿ ಸುದ್ದಿಯನ್ನು ಬಿತ್ತರಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಹೇಳಿದರು.ಆಧುನಿಕ ತಂತ್ರಜ್ಞಾನದ ಬೆಳವಣಿಗೆಯ ವೇಗಕ್ಕೆ ತಕ್ಕಂತೆ ಪತ್ರಕರ್ತರು ಅಪ್‌ಡೇಟ್ ಆಗಬೇಕಾಗಿದೆ ಎಂದು ಹೇಳಿದರು. ಎಐ ತಂತ್ರಜ್ಞಾನದೊಂದಿಗೆ
ಜಗತ್ತೇ ಡಿಜಿಟಲ್ ಕಡೆಗೆ ವೇಗವಾಗಿ ಸಾಗುತ್ತಿದೆ. ಆದುದರಿಂದ ತಾಂತ್ರಿಕತೆಗೆ ತಕ್ಕಂತೆ ಪತ್ರಕರ್ತರು ವೃತ್ತಿ ಬದುಕಿನಲ್ಲಿ ಬದಲಾಗಬೇಕು. ತಾಂತ್ರಿಕವಾಗಿ
ಅಪ್‌ಡೇಟ್ ಆಗಲು ಸಂಘವು ಪತ್ರಕರ್ತರಿಗೆ ತರಬೇತಿ ನೀಡಬೇಕು ಎಂದು ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೇತೃತ್ವದಲ್ಲಿ ನೂತನ ಪದಾಧಿಕಅಧ್ಯಕ್ಷ ಅಧಿಕಾರ ವಹಿಸಿಕೊಂಡರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್‌ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ಸ್ವಾಗತಿಸಿ, ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಸಂಘದ ಗೌರವಾಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಉಪಾಧ್ಯಕ್ಷೆ ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ನೋಂದಣಿ ಕಾರ್ಯಕ್ರಮ ನಡೆಯಿತು.
ಡಾ.ಉಜ್ವಲ್ ಯು.ಜೆ., ತಾಲೂಕು ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪಾಡಿ ಹಾಗೂ ಅಂಚೆ ಕಚೇರಿಯ ಸಿಬ್ಬಂದಿ ಕೃಪೇಶ್ ಅವರನ್ನು ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.