







ಗುತ್ತಿಗಾರು ನಿವಾಸಿ ಮಾಥ್ಯೂರವವರು ಇಂದು ಹೃದಯಘಾತದಿಂದ ನಿಧನರಾದರು.
ಅವರು ಇಂದು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದು ಮಧ್ಯಾಹ್ನದ ಮೇಲೆ ಕೆಲಸದ ಸ್ಥಳದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತರಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಪ್ರಿಯಾ ಮ್ಯಾಥ್ಯೂ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.










