
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎನ್.ಎಸ್.ಎಸ್ ಘಟಕ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಸಹಯೋಗದಲ್ಲಿ ಸೆ. 24ರಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.








ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ ಕೆ.ವಿ ಚಿದಾನಂದ ಎನ್.ಎಸ್.ಎಸ್ ದ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಶಿಸ್ತು ಮತ್ತು ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಮನಪೂರ್ವಕವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಗಿಸಿಕೊಳ್ಳಿ ಎಂದು ನುಡಿದರು.

ಕಾಲೇಜಿನ ಡೀನ್ ಪ್ರೊ. ಡಾ ನೀಲಾಂಬಿಕೈ ನಟರಾಜನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್.ಎಸ್.ಎಸ್ ಘಟಕಾಧಿಕಾರಿ ಚಿತ್ರಲೇಖ ಕೆ.ಎಸ್ ಮಾತನಾಡಿ “ಎನ್.ಎಸ್.ಎಸ್. ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳು, ಸ್ವಚ್ಛತಾ ಕಾರ್ಯಗಳು, ರಕ್ತದಾನ ಶಿಬಿರಗಳು, ಪರಿಸರ ಸಂರಕ್ಷಣೆ ಹೀಗೆ ಅನೇಕ ಸೇವಾ ಕಾರ್ಯಗಳು ನಡೆಯುತ್ತಿವೆ. ಇದು ವಿದ್ಯಾರ್ಥಿಗಳಿಗೆ ಸಮಾಜದ ನಿಜವಾದ ಮುಖವನ್ನು ಅರಿಯುವ ಅವಕಾಶ ಒದಗಿಸುತ್ತದೆ” ಎಂದರು.
ವೇದಿಕೆಯಲ್ಲಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ನ ಪ್ರಾಂಶುಪಾಲರುಗಳಾದ ಡಾ ಪ್ರಮೋದ್ ಕೆ. ಜೆ ಹಾಗೂ ಚಂದ್ರಾವತಿ ಕೆ. ಎಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಪ್ರಾಂಶುಪಾಲ ಡಾ. ಮನೀಶ್, ಎಮರ್ಜೆನ್ಸಿ ಮೆಡಿಸಿನ್ ವಿಭಾಗ ಮುಖ್ಯಸ್ಥರು ಡಾ. ಲೂಯಿಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಜಿಮ್ಸಿ ಜಾನ್, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎನ್ ಎಸ್ ಎಸ್ ಸಂಯೋಜಕರು ವಿದ್ಯಾ ಕೆ. ಡಾ. ವೀಣಾ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಎನ್. ಎಸ್. ಎಸ್ ಕುರಿತಾದ ಕಿರು ಪ್ರಹಸನ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾ ಕೆ ಸ್ವಾಗತಿಸಿ, ಜಿಮ್ಸಿ ಜಾನ್ ವಂದಿಸಿದರು. ತೃತೀಯ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ಸಿಯಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಜಾಥಾ ಹಾಗೂ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರಾಂಶುಪಾಲರು, ಪ್ರಾದ್ಯಾಪಕರು, ಎನ್ ಎನ್ ಎಸ್ ಸ್ವಯಂಸೇವಕರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕೊನೆಯಲ್ಲಿ ವಾರ್ಡಿನಲಿದ್ದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.








