ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಸೆ. 22 ರಂದು ಸತ್ಯನಾರಾಯಣ ಪೂಜೆ ಮತ್ತು ಶಾರದಾ ಪೂಜೆ ನೆರವೇರಿತು. ಆರಂಭದಲ್ಲಿ ಸಂಕಲ್ಪ ನೆರವೇರಿಸಿದ ಪುರೋಹಿತರು ಪೂಜೆಯ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿ ಪೂಜೆ ಸಮರ್ಪಿಸಿದರು.
















ಬಳಿಕ ದೇವತಾ ಪ್ರಾರ್ಥನೆ ಮಾಡಿ ಸರ್ವರಿಗೂ ಪ್ರಸಾದ ವಿತರಿಸಿದರು.ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಸದಸ್ಯ ಗಣೇಶ್ ಪರ್ವತಮುಖಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಜನೆ ನೆರವೇರಿಸಿದರು. ಬಳಿಕ ಹುಲಿವೇಷ ಕುಣಿತ ನಡೆಯಿತು. ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಪ್ರಾಚಾರ್ಯ ಸೋಮಶೇಖರ್ ನಾಯಕ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಂದಾ ಹರೀಶ್, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್,ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್. ಆರ್, ಸ್ಟಾಪ್ ಸೆಕ್ರೆಟರಿ ಗಿರೀಶ್,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳಾರು, ಉಪಾಧ್ಯಕ್ಷ ಗುಣವರ್ಧನ ಕೆದಿಲ, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











