ಮಂಡೆಕೋಲು ಸಹಕಾರಿ ಸಂಘಕ್ಕೆ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿ

0

ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರಿ ಸಂಘದ ವತಿಯಿಂದ ಕೊಡಮಾಡುವ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿಗೆ ಮಂಡೆಕೋಲು ಸಹಕಾರ ಸಂಘ ಭಾಜನವಾಗಿದ್ದು, ಸೆ.25ರಂದು ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉದಯಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಕಳೆದ ಏಳು ವರ್ಷದಿಂದ ಸ್ಕ್ಯಾಡ್ಸ್ ಜೊತೆಗಿನ ವ್ಯವಹಾರಕ್ಕಾಗಿ ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಈ ವರ್ಷ ವಿಶೇಷವಾಗಿ ಸಂಸ್ಥೆಯು ಜಿಲ್ಲೆಯ ಸಮಗ್ರ ಪ್ರಶಸ್ತಿಯನ್ನು ಪಡಕೊಂಡಿದೆ.