ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಆಲ್ಜೈಮರ್ಸ್ ದಿನಾಚರಣೆ

0


ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವಿಭಾಗದ ವತಿಯಿಂದ ವಿಶ್ವ ಆಲ್ಜೈಮರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ವಹಿಸಿದ್ದರು.


ಜನರಲ್ ಮೆಡಿಸಿನ್ ವಿಭಾಗ ಮುಖ್ಯಸ್ಥ ಪ್ರೊ. ಡಾ. ಪ್ರಕಾಶ್ ರಾವ್ ಆಲ್ಜೈಮರ್ಸ್ ಕಾಯಿಲೆಯ ಪ್ರಾಥಮಿಕ ಲಕ್ಷಣಗಳು, ತಡೆಗಟ್ಟುವ ವಿಧಾನಗಳು ಮತ್ತು ಆರೈಕೆ ಕ್ರಮಗಳ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು.


ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಡಾ. ರವಿಶಂಕರ್, ಡಾ. ಸರ್ಫರಾಜ್ ಜಮಾಲ್, ಡಾ. ಪ್ರೀತಿರಾಜ್ ಬಲ್ಲಾಳ್, ಡಾ. ಲೂಯಿಸ್, ಡಾ. ಸುನೀತಾ, ಡಾ. ಲೋಕೇಶ್, ಡಾ. ಅನಿರುದ್ಧ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಮಾಣ ಪತ್ರ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.