ಪೆರುವಾಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ ಕಾರ್ಯಕ್ರಮ

0

ಡಾ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪೆರುವಾಜೆ ಇಲ್ಲಿ ಸೆಪ್ಟೆಂಬರ್ 25 ರಂದು 2025 -26 ನೇ ಸಾಲಿನ ಸ್ನಾತಕೋತ್ತರ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮತ್ತು “ಉದ್ಯಮಶೀಲತೆ ಮತ್ತು ಭಾರತ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ಅಧ್ಯಕ್ಷರಾದ ಡಾ. ವಿಜಯ ಸರಸ್ವತಿ ಬಿ. ಇವರು ಆಗಮಿಸಿ ಉದ್ಯಮಶೀಲತೆಯ ಮಹತ್ವ ಹಾಗೂ ಯುವಜನತೆಯಲ್ಲಿ ಉದ್ಯಮಶೀಲತೆಯ ಮೂಲಕ ನಾವಿನ್ಯತೆ ,ಅಪಾಯಗಳನ್ನು ಎದುರಿಸುವ ಧೈರ್ಯ, ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ,ಹಾಗೂ ಆರ್ಥಿಕತೆಗೆ ಕೊಡುಗೆ ನೀಡುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಮಣ್ಯ ಪಿ .ಎಸ್. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಶ್ರೀಮತಿ ಪ್ರತಿಮಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪೊನ್ನಪ್ಪ ಎ.ಎಂ. ಉಪಸ್ಥಿತರಿದ್ದರು. ನೆರೆದವರನ್ನು ಕುಮಾರಿ ರಜತ ಸ್ವಾಗತಿಸಿ, ಕುಮಾರಿ ವಿದ್ಯಾಶ್ರೀ ವಂದಿಸಿದರು. ಕುಮಾರಿ ನಿರೀಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು .