ದಿನಾಂಕ 09/09/2025ರಂದು ಸೆ.9 ರಂದು ಸುಳ್ಯದ ಹಳೆಗೇಟು ಬಳಿ ಪಾರ್ಕಿಂಗ್ ಮಾಡಿದ್ದ ಎರಡು ಕಾರುಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗುದ್ದಿದ ಪ್ರಕರಣಕ್ಕೆ ಸಂಬಂಧಿಸಿ ಬಸ್ ಚಾಲಕ ಗುರುಪ್ರಸಾದ್ ಎಂಬವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೊಳಗಾಗಿರುವ ಚಂದ್ರಾ ಕೋಲ್ಚಾರ್ ರವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ.















ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಎರಡು ಕಾರುಗಳೂ ಜಖಂ ಗೊಂಡಿದ್ದು , ಆ ಪೈಕಿ ಒಂದು ವಾಹನದ ಮಾಲಕರಾದ ಚಂದ್ರಶೇಖರ ಕೋಲ್ಚಾರ್ ಎಂಬವರು ಬಸ್ಸಿನ ಚಾಲಕನನ್ನು ಬಸ್ಸಿನಿಂದ ಎಳೆದು ಹಾಕಿ ಕೈಯಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಎಂದು ಆರೋಪಿಸಿ ಬಸ್ ಚಾಲಕ ಗುರುಪ್ರಸಾದ್ ನೀಡಿದ ದೂರಿನ ಮೇರೆಗೆ ಚಂದ್ರಶೇಖರ ಕೋಲ್ಚಾರ್ ಅವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿತ ಚಂದ್ರಶೇಖರ್ ಕೋಲ್ಚಾರ್ ಅವರಿಗೆ ಪುತ್ತೂರಿನ ಮಾನ್ಯ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಶರ್ತಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರವಾಗಿ ಸುಳ್ಯದ ವಕೀಲರಾದ ಎಂ. ವೆಂಕಪ್ಪ ಗೌಡ, ಚಂಪಾ ವಿ.ಗೌಡ, ರಾಜೇಶ್ ಬಿ.ಜಿ., ಹಾಗೂ ಶ್ಯಾಮ್ ಪ್ರಸಾದ್ ಎನ್.ಕೆ. ವಾದಿಸಿದ್ದರು.










