ಸಂಜೆ ಸಭಾ ಕಾರ್ಯಕ್ರಮ, ಸನ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು








ಯುವಶಕ್ತಿ ಸಂಘ ಐವರ್ನಾಡು ,ಸಾರ್ವಜನಿಕರ ಸಹಕಾರದೊಂದಿಗೆ 21 ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ಸೆ.27 ರಂದು ಬೆಳಿಗ್ಗೆ ಪ್ರಾರಂಭಗೊಂಡಿದ್ದು ಸೆ.28 ರಂದು ಐವರ್ನಾಡು ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆಯಲಿದೆ.
ಸೆ.27 ರಂದು ಬೆಳಿಗ್ಗೆ ಪುತ್ತಿಲ ಶ್ರೀ ಗಿರೀಶ್ ಅಸ್ರಣ್ಣರವರ ನೇತೃತ್ವದಲ್ಲಿ ಐವರ್ನಾಡು ಸ.ಹಿ.ಪ್ರಾ.ಶಾಲಾ ಮಾತಾಜಿ ಸಭಾಭವನದ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ಗಣಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಠಾಪನೆ ನಡೆಯಿತು.
ನಂತರ ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು ನಡೆಯುತ್ತಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 6.00 ಕ್ಕೆ ಪ್ರಾಥಮಿಕ ಶಾಲಾ ಮಕ್ಕಳ ಡ್ಯಾನ್ಸ್,ಶ್ರೀ ಪಂಚಲಿಂಗೇಶ್ವರ ಯಕ್ಷಕಲಾ ಕೇಂದ್ರ ಮತ್ತು ಸ.ಹಿ.ಪ್ರಾ.ಶಾಲೆ ಐವರ್ನಾಡು ಇಲ್ಲಿನ ವಿದ್ಯಾರ್ಥಿಗಳಿಂದ “ಸುದರ್ಶನ ಗರ್ವಭಂಗ” ಎಂಬ ಯಕ್ಷಗಾನ ನಡೆಯಲಿದೆ.
ರಾತ್ರಿ ಗಂಟೆ 8.00 ರಿಂದ ಸಾಂಸ್ಕೃತಿಕ ಸಂಜೆ ಉದ್ಘಾಟನೆ ನಡೆಯಲಿದೆ.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಅಧ್ಯಕ್ಷತೆ ವಹಿಸಲಿದ್ದಾರೆ..ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಹರೀಶ್ ಇಂಜಾಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಅರ್ಚಕ ಪುರೋಹಿತ ಪದ್ಮನಾಭ ಭಟ್ ರವರನ್ನು ಸನ್ಮಾನಿಸಲಾಗುವುದು.
ಸಭಾ ಕಾರ್ಯಕ್ರಮ ನಡೆದ ಬಳಿಕ ಶ್ರೀ ದೇವರಿಗೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಅಮೋಘ ಸಿಡಿಮದ್ದಿನ ಪ್ರದರ್ಶನ ನಡೆಯಲಿದೆ.
ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 9.00 ರಿಂದ ನಮ್ಮ ಡಿ.ವಿ ಬಲೆತೆಲಿಪಾಲೆ ಖ್ಯಾತಿಯ ಸಾಯಿ ಪುತ್ತೂರು ಅರ್ಪಿಸುವ ಮಕ್ಕರ್ ಟೀಮ್ ರವರಿಂದ ತುಳು ಹಾಸ್ಯಕಾರ್ಯಕ್ರಮ “ತೆಲಿಕೆ ಬಂಜಿ ನಿಲಿಕೆ” ನಡೆಯಲಿದೆ.
ಬೈರವಿ ನಾಟ್ಯಾಲಯ ಐವರ್ನಾಡು ಇವರಿಂದ “ನೃತ್ಯಾರ್ಪಣಂ” ಹಾಗೂ ಫ್ಯೂಷನ್ ಇನ್ಸಿಟ್ಯೂಟ್ ಆಫ್ ಡ್ಯಾನ್ಸ್ ಸುಳ್ಯ ತಂಡದವರಿಂದ “ಡ್ಯಾನ್ಸ್ ಡ್ಯಾನ್ಸ್”
ಯುವಶಕ್ತಿ ಸದಸ್ಯರಿಂದ “ಕಾರ್ಯಕ್ರಮ ವೈವಿಧ್ಯ” ನಡೆಯಲಿದೆ.
ಸೆ.29 ರಂದು ಬೆಳಿಗ್ಗೆ ಶ್ರೀ ಗುರುದೇವಾ ಭಜನಾ ಮಂಡಳಿ ಐವರ್ನಾಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
“ಅಕ್ಷರಾಭ್ಯಾಸ ” “ಆಯುಧ ಪೂಜೆ” ನಡೆಯಲಿದೆ.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ಅಪರಾಹ್ನ ಗಂಟೆ 2.30 ರಿಂದ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ಐವರ್ನಾಡಿನ ಮುಖ್ಯ ರಸ್ತೆಯಲ್ಲಿ ಸಾಗಿ ಬಾಂಜಿಕೋಡಿ ಹೊಳೆಯಲ್ಲಿ ಜಲಸ್ತಂಭನ ಮಾಡಲಾಗುವುದು.










