ಕೊಯಿಕುಳಿ ಶ್ರೀಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ

0

ದುಗ್ಗಲಡ್ಕದ ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಪೂಜೆ ಸೆ.27ರಂದು ನಡೆಯಿತು.

ಸಂಜೆ ದುರ್ಗಾಪೂಜೆ ಆರಂಭಗೊಂಡು ಭಜನಾ ಕಾರ್ಯಕ್ರಮ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸುಬ್ರಹ್ಮಣ್ಯ ಭಟ್ ರೆಂಜಾಳ ವೈದಿಕ ಕಾರ್ಯ ನಿರ್ವಹಿಸಿದರು.

ಸೇವಾ ಸಮಿತಿಯ ಅಧ್ಯಕ್ಷ ಶಶಿಧರ ಎಂ.ಜೆ., ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಭಾಸ್ಕರ ಪೂಜಾರಿ ಬಾಜಿನಡ್ಕ, ಸಮಿತಿಯ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.