ಶ್ರೀ ಮಾಡಬಾಗಿಲು ಕಂಬಳ ಆನಂದ ಗೌಡ ಟ್ರಸ್ಟ್ (ರಿ) ಇದರ ವತಿಯಿಂದ 10 ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅ..2 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.









2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಭಾಗದಲ್ಲಿ ಸುಳ್ಯ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪುರಸ್ಕೃತರಿಗೆ ರೂ. 10,00,000/-(ಹತ್ತು ಲಕ್ಷ)ದ ಶಾಶ್ವತ ವಿದ್ಯಾನಿಧಿಯ ಬಡ್ಡಿ ಹಣ ಗಳಿಕೆಯನ್ನು ವಿತರಿಸಲಾಗುವುದು. 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡಬ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪುರಸ್ಕೃತರಿಗೆ ರೂ.1 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗುವುದು.
ಟ್ರಸ್ಟ್ ನ ಅಧ್ಯಕ್ಷ ಬಿ. ಎಂ. ಆನಂದ ಗೌಡ ಮಾಡಬಾಗಿಲು ಕಂಬಳ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು. ಕೆ. , ಗ್ರಾಮ ಪಂಚಾಯತ್ ಅಧ್ಯಕ್ಷೆ. ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ನ್ಯಾಯವಾದಿ ದಿನೇಶ್ ಮಡಪ್ಪಾಡಿ , ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ , ಪ್ರಾಂಶುಪಾಲ ಚಿದಾನಂದ ಕೆ. , ಮುಖ್ಯೋಪಾಧ್ಯಾಯ ದೇವಿಪ್ರಸಾದ್ ಎ , ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಚಿನ್ನಪ್ಪ ಕಾಣಿಕೆ , ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ಬಿ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಸವಿತಾರ ಮುಡೂರು ಉಪಸ್ಥಿತರಿರುವರು.










