ಕೆ ವಿ ಜಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಖ್ಯಾತ ವೈದ್ಯರ ತಂಡದಿಂದ ಅರಿವು ಕಾರ್ಯಕ್ರಮ
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವ 2025 ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಅಂಗವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಸೆ 28 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ವೈದ್ಯರಾದ ಡಾ. ಸಿ ರಾಮಚಂದ್ರ ಭಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಭಾರತೀಯ ವೈದ್ಯಕೀಯ ಸಂಘದ ಸುಳ್ಯ ತಾಲೂಕು ಅಧ್ಯಕ್ಷರಾದ ಶ್ರೀಮತಿ ಡಾ. ವೀಣಾ ರವರ ಆರೋಗ್ಯ ಜಾಗೃತಿ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್,ಕಾಲೇಜು ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮಟ್ಟಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ ಪಿ,ಶಾಲಾ ಇಕೋ ಕ್ಲಬ್ ನ ನೋಡಲ್ ಅಧಿಕಾರಿ ಶ್ರೀಮತಿ ಪೂರ್ಣಿಮಾ ಹಾಗೂ ಕಾಲೇಜು ವಿಭಾಗದ ಸ್ಪಟಿಕ ವಿಜ್ಞಾನ ಸಂಘದ ನೋಡಲ್ ಅಧಿಕಾರಿ ಡಾ. ನವೀನ್ ಉಪಸ್ಥಿತರಿದ್ದರು.















ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಹದಿಹರೆಯದ ಸಮಸ್ಯೆಗಳು ಮತ್ತು ಮಾನಸಿಕ ಒತ್ತಡ ನಿರ್ವಹಣೆ ಕುರಿತು ಡಾ.ರಶ್ಮಿ ಹಾಗೂ ಡಾ.ಪೂನಂ ರವರು ಮಾಹಿತಿ ನೀಡಿದರು.
ಆಹಾರ ಮತ್ತು ಆರೋಗ್ಯದ ಬಗ್ಗೆ ಹಿರಿಯ ವೈದ್ಯರಾದ ಶ್ರೀಮತಿ ಸಾಹಿಗೀತಾ ರವರು ಮಾಹಿತಿ ನೀಡಿದರು.ತುರ್ತು ಸಂದರ್ಭದಲ್ಲಿ ಹೃದಯ ಸ್ತಂಭನ ಉಂಟಾದಾಗ ಅದನ್ನು ಸರಿಪಡಿಸಲು ಮಾಡುವ ಪ್ರಥಮ ಚಿಕಿತ್ಸೆಯ ಪ್ರಾಥಕ್ಷತೆ ಯನ್ನು ಕೆ ವಿ ಜಿ ಆಸ್ಪತ್ರೆಯ ವೈದ್ಯರಾದ ಭರತ್ ಶೆಟ್ಟಿ ಹಾಗೂ ಅವರ ತಂಡದವರು ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಎಪಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕ ವೃಂದದವರು, ಕಾಲೇಜು ವಿಭಾಗದ ಉಪನ್ಯಾಸಕರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಜಾಗೃತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡು. ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ ಬಿ ಸದಾಶಿವ,ಸಹ ಖಜಾಂಚಿ ರಾಮಚಂದ್ರ ಉಪಸ್ಥಿತರಿದ್ದರು.










