ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡ ನ್ಯಾಯಾಧೀಶರುಗಳು
ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಪೂರ್ವಸಿದ್ಧತೆಗಾಗಿ ಸುಳ್ಯ ನ್ಯಾಯಾಲಯದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ವನ್ನು ಸೆ 29 ರಂದು ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯದಲ್ಲಿ ನ್ಯಾಯಾಧೀಶರುಗಳು ತೊಡಗಿಕೊಂಡು ಪರಿಸರದ ಕಸ ಕಡ್ಡಿಗಳನ್ನು ಹೆಕ್ಕಿ ಪರಿಸರ ಸ್ವಚ್ಛತೆಯಲ್ಲಿ ಕೈಜೋಡಿಸಿದರು.
















ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಸುಳ್ಯ ತಾಲೂಕು ವಕೀಲರ ಸಂಘ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಹಿರಿಯ ನ್ಯಾಯಾಧೀಶರಾದ ಮೋಹನ್ ಬಾಬು ಬಿ, ಕಿರಿಯ ನ್ಯಾಯಾಲಯದ ನ್ಯಾಯಾಧೀಶೆ ಕುಮಾರಿ ಅರ್ಪಿತಾ, ವಕೀಲರ ಸಂಘದ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಹಾಗೂ ಪದಾಧಿಕಾರಿಗಳು, ಸದಸ್ಯರುಗಳು, ನ್ಯಾಯಾಲಯದ ಸಿಬ್ಬಂದಿ ವರ್ಗದವರು, ಆರಕ್ಷಕ ಸಿಬ್ಬಂದಿಗಳು ಭಾಗವಹಿಸಿದ್ದರು.










