ಸೆ.30ರಂದು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಭ್ಯಾಸ, ವಾಹನ ಪೂಜೆ, ಮತ್ತು ಆಯುಧ ಪೂಜಾ ಕಾರ್ಯಕ್ರಮವು ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಅವರ ಮಾರ್ಗದರ್ಶನದಲ್ಲಿ ಜರಗಿತು.










ಈ ಸಂದರ್ಭದಲ್ಲಿ ಭಜನೆಯ ಮೂಲಕ ದೇವರ ನಾಮವನ್ನು ಸ್ತುತಿಸಲಾಯಿತು.
ತದನಂತರ ವಾಹನ ಪೂಜೆ, ಆಯುಧ ಪೂಜೆ ನಡೆದು ಪ್ರಸಾದ ವಿತರಣೆಯ ಬಳಿಕ ಪೋಷಕರ ಸಭೆಯು ಜರಗಿತು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.










