ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ ‘ಟೆಕ್ ಕೆಡೆಟ್’ನಿಂದ “software as a solution – Technical Session” ಸೆ. 27 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ Ckey software ನ ಸಿಇಒ ಸ್ಕಂದ ಎನ್. ಭಟ್ ಭಾಗವಹಿಸಿ ಈಗಿನ ಆಧುನಿಕ ತಂತ್ರಜ್ಞಾನವನ್ನು ಸರಳವಾಗಿ ಪ್ರಾಯೋಗಿಕವಾಗಿ ವಿವರಿಸಿದರು.















ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ ಎಂ.ಎಂ ಶುಭಹಾರೈಸಿದರು.
ವೇದಿಕೆಯಲ್ಲಿ S.W.O ರತ್ನಾವತಿ ಡಿ, IQAC ಸಂಯೋಜಕಿ ಡಾ. ಮಮತಾ ಕೆ.ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಹಾಗೂ ಸಂಯೋಜಕಿ ಭವ್ಯ ಮನು ಪೆರುಮುಂಡ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.










