ಸುಳ್ಯ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ‘ಹೃದಯ ರಕ್ಷಕ್’ ಹೃದಯ ಸಮಸ್ಯೆಗಳ ಹಾಗೂ ರಕ್ಷಣೆಯ ಕುರಿತು ಯುವಜನರಿಗೆ ತರಬೇತಿ ಕಾರ್ಯಕ್ರಮ ಅ.2ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.
ತರಬೇತಿ ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಮ್ ಮೋಹನ್ ಕೆ.ಎನ್. ಉದ್ಘಾಟಿಸಿದರು.
ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.















ಸಂಪನ್ಮೂಲ ವ್ಯಕ್ತಿಯಾಗಿ ಡಾ.ಕಾರ್ತಿಕ್ ರಾವ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಯುವಜನ ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಮುಖ್ಯ ಅತಿಥಿಯಾಗಿದ್ದರು.
ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ, ಕಾರ್ಯದರ್ಶಿ ಮುರಳಿ ನಳಿಯಾರು ವೇದಿಕೆಯಲ್ಲಿ ಇದ್ದರು.
ಇದೇ ಸಂದರ್ಭದಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಬ್ಯಾನರ್ ಅನಾವರಣ ನಡೆಯಿತು.
ನಿರ್ದೇಶಕ ದಿನೇಶ್ ಹಾಲೆಮಜಲು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕೋಶಾಧಿಕಾರಿ ಲೋಹಿತ್ ಬಾಳಿಕಲ ವಂದಿಸಿದರು. ಪ್ರವೀಣ್ ಜಯನಗರ – ನಿತೀಶ್ ಎರ್ಮೆಟ್ಟಿ ಕಾರ್ಯಕ್ರಮ ನಿರೂಪಿಸಿದರು.










