ಶ್ರೀ ಶಾರದಾಂಬಾ ಭಜನಾ ಮಂಡಳಿ (ರಿ)ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ಆಶ್ರಯದಲ್ಲಿ ಪಂಜ ಪರಿಸರದ ನಾಡ ಹಬ್ಬ 16ನೇ ಶ್ರೀ ಶಾರದೋತ್ಸವ-2025 ಅ.1 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ವಿಜೃಂಭಣೆಯಿಂದ ಆ ಪ್ರಯುಕ್ತ ವಿವಿಧ ತಂಡಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಿತು.












ರಂಜನಿ ಸಂಗೀತ ಸಭಾ ಎಲಿಮಲೆ (ರಿ.) ಪಂಜ ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತ ಗುರುಗಳಾದ ಶ್ರೀಮತಿ ರೇಖಾ ಹೊನ್ನಾಡಿ ಇವರ ನಿರ್ದೇಶನದಲ್ಲಿ ಸ್ವರ ರಾಗ ಸುಧಾ. ವಿಶ್ವ ಕಲಾನಿಕೇತನ ಕಲ್ಚರಲ್ & ಆರ್ಟ್ಸ್ ಪುತ್ತೂರು ಪಂಜ ಶಾಖೆ ಇದರ ವಿದ್ಯಾರ್ಥಿಗಳಿಂದ ಭರತನಾಟ್ಯ. ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಬೆಳ್ಳಾರೆ ಮತ್ತು ಪಂಜ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಸಂಭ್ರಮ ನಡೆಯಿತು.










