







ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಇದರ ಅಮೃತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಶ್ರಮದಾನ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸವಿತಾ ಸಮಾಜ ಹಾಗೂ ಬಾರ್ಬರ್ ಅಸೋಸಿಯೇಷನ್ ವತಿಯಿಂದ ಅ. 7 ರಂದು ಶ್ರಮದಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ಅಧ್ಯಕ್ಷ ಉದಯ ಜಟ್ಟಿಪಳ್ಳ, ಬರ್ಬರ್ ಅಸೋಸಿಯೇಷನ್ ಅಧ್ಯಕ್ಷ ಪದ್ಮನಾಭ ಎಚ್ ನಾವೂರು, ಕಾರ್ಯದರ್ಶಿ ಭವಾನಿ ಶಂಕರ್ ಕೇರ್ಪಳ, ಹಾಗೂ ಸಂಘಟನೆಯ ಸದಸ್ಯರುಗಳು ಭಾಗವಹಿಸಿದ್ದರು.
ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಶ್ರೀಮತಿ ಮಂಜುಳಾ ಬಡಿಗೇರ್, ಉಪಾಧ್ಯಕ್ಷ ಹಸೈನಾರ್ ಜಯನಗರ, ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.










