ವಿಶ್ವಸಂಸ್ಥೆಯಲ್ಲಿ ಮೊಳಗಿದ ಭಾರತದ ಧ್ವನಿ – ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಕ್ಯಾ.ಚೌಟ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದು ಅಧಿವೇಶನದಲ್ಲಿ ಪಾಲ್ಗೊಂಡಿದ್ದಾರೆ.
‘2030ಕ್ಕೆ ಐದು ವರ್ಷಗಳು – ಸುಸ್ಥಿರ ಅಭಿವೃದ್ಧಿಗಾಗಿ ಬಹುಪಕ್ಷೀಯ ಪರಿಹಾರಗಳು..’ ಎಂಬ ವಿಷಯದ ಮೇಲೆ ವಿಶ್ವಸಂಸ್ಥೆಯ ಪ್ರಕಾರಗಳ ಎರಡನೇ ಸಮಿತಿಯ ಸಾಮಾನ್ಯ ಚರ್ಚೆಯಲ್ಲಿ ಭಾರತದ ನಿಲುವನ್ನು ಕ್ಯಾ.ಬ್ರಿಜೇಶ್ ಚೌಟ ಪ್ರಸ್ತುತ ಪಡಿಸಿದರು.












ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಈ ಅಧಿವೇಶನದಲ್ಲಿ ಭಾಗವಹಿಸಿದೆ. ಆ ಪೈಕಿ ಪಿಪಿ ಚೌಧರಿ ನೇತೃತ್ವದ ಮೊದಲ ನಿಯೋಗವು ಅ.8 ರಿಂದ 14ರವರೆಗೆ ನಡೆಯುವ ಅಧಿವೇಶನದಲ್ಲಿ ಪಾಲ್ಗೊಂಡಿದ್ದು, ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ಥಾನ ಪಡೆದಿದ್ದರು.

ಇವರೊಂದಿಗೆ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರೀಭರತ್ ಮತ್ತು ರಾಜೀವ್ ರೈ ಅವರು ನಿಯೋಗದಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ.
ಸುಮಾರು ಎರಡು ದಶಕಗಳ ಬಳಿಕ ಭಾರತದ ಸಂಸದೀಯ ರಾಜತಾಂತ್ರಿಕತೆಯನ್ನು ಪುನರುಜ್ಜೀವಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುತ್ತಿದೆ.










