ಅಡ್ತಲೆಯಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

0

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಅರಂತೋಡು, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಹಾಗೂ ಚಂದನ ಯುವತಿ ಮಂಡಲ (ರಿ.) ಅಡ್ತಲೆ ಇವರ ಸಹಕಾರದೊಂದಿಗೆ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ,75 ದಿನಗಳ ಸ್ವಚ್ಚತಾ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಇವರು ದೀಪ ಬೆಳಗುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಭವಾನಿ ಶಂಕರ ಅಡ್ತಲೆ, ಉಪಾಧ್ಯಕ್ಷರಾದ ಲೋಹಿತ್ ಮೇಲಡ್ತಲೆ, ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ, ಚಂದನ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಅಡ್ತಲೆ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಭಾಗವಹಿಸಿದರು. ಅಡ್ತಲೆ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. 75 ದಿನಗಳು ನಿರಂತರವಾಗಿ ಸ್ವಚ್ಛತಾ ಆಂದೋಲನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿವೆ.