ಆಲೆಟ್ಟಿ ಸದಾಶಿವ ದೇವಳದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

0

ಸುಳ್ಯಯುವಜನ ಸಂಯುಕ್ತ ಮಂಡಳಿ ಮತ್ತು ಆಲೆಟ್ಟಿ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ವತಿಯಿಂದ 75 ದಿನಗಳು ನಡೆಯಲಿರುವಪಂಚಸಪ್ತತಿ ಸ್ವಚ್ಚತಾ ಅಭಿಯಾನಕ್ಕೆ ಅ.10 ರಂದು ಸದಾಶಿವ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು.

ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ರವರು ಅಭಿಯಾನಕ್ಕೆಚಾಲನೆ ನೀಡಿದರು.
ಜನನಿ ಕ್ಲಬ್ ಅಧ್ಯಕ್ಷ ಸತೀಶ್ ಕುಲಾಲ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಸ್ದಾನದ ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ, ಪ್ರಗತಿಪರ ಕೃಷಿಕ ಉದಯ ಕುಡೆಕಲ್ಲು, ಸದಾಶಿವ ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಚಂದ್ರಶೇಖರ ಸ್ವಾಗತಿಸಿ,
ಶಶಿಧರ ಗಡಿಪಣೆ ವಂದಿಸಿದರು.
ಕ್ಲಬ್ ಗೌರವಾಧ್ಯಕ್ಷ ಲತೀಶ್ ಗುಂಡ್ಯ ಪ್ರಾಸ್ತಾವಿಕ ಮಾತಿನೊಂದಿಗೆ ಕಾರ್ಯಕ್ರಮ ನಿರೂಪಿಸಿದರು.ಕ್ಲಬ್ಬಿನ ಸದಸ್ಯರು ಭಾಗವಹಿಸಿದರು.