














ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ರಾಜೇಶ್ವರಿ ನ್ಯಾಷನಲ್ ಸಾಣೂರು, ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ವಿಭಾಗ ಮಟ್ಟದ ಯೋಗ ಸ್ಪರ್ಧೆಯ ಟ್ರೇಡಿಷನಲ್ ವಿಭಾಗದಲ್ಲಿ ಪ್ರಥಮ ಹಾಗೂ ಆರ್ಟಿಸ್ಟಿಕ್ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲಾ ವಿದ್ಯಾರ್ಥಿ ತನುಷ್. ಎಮ್. ಎಚ್. ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ನವೆಂಬರ್ ತಿಂಗಳಿನಲ್ಲಿ ಮಂಡ್ಯ ದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿದಿಸಲಿದ್ದಾರೆ. ಇವರು ಮೋಂಟಡ್ಕ ಮನೆತನದ ಶ್ರೀ ಮತಿ ಭವಾನಿ ಹಾಗೂ ಹರೀಶ್ ದಂಪತಿಗಳ ಪುತ್ರಿ.










