ಶ್ರಮ ಮತ್ತು ಸಮಾಜಸೇವೆಯ ಬದ್ಧತೆಯಿಂದ ಶಹೀದ್ ಈ ಸ್ಥಾನಕ್ಕೆ ಏರಿದ್ದಾರೆ: ಮುಖಂಡರ ಅಭಿಮತ

ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಟಿ.ಎಂ.ಶಹೀದ್ ತೆಕ್ಕಿಲ್ ರವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವು ಶಹೀದ್ ಅಭಿನಂದನಾ ಸಮಿತಿಯ ನೇತೃತ್ವದಲ್ಲಿ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಅ. 11 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ರಾಜಕೀಯ ಹಾಗೂ ಸಹಕಾರಿ ಧುರೀಣ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ಶಹೀದ್ ಎಂ.ಎಲ್.ಸಿ.ಯಾಗಲಿ ಅಭಿನಂದನಾ ಭಾಷಣ ಮಾಡಿದ ಹಿರಿಯ ಸಾಹಿತಿ ಹಾಗೂ ಎನ್ನೆಂಸಿ ನಿವೃತ್ತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲರವರು ಮಾತನಾಡಿ ” ಟಿ.ಎಂ.ಶಹೀದ್ ತನ್ನ ಅಜ್ಜ ತೆಕ್ಕಿಲ್ ಮಹಮ್ಮದ್ ಹಾಜಿಯವರ ಗುಣ ಲಕ್ಷಣಗಳನ್ನು ಪಡೆದುಕೊಂಡವರು. ಅಜ್ಜನಂತೆ ಎಲ್ಲ ಧರ್ಮದವರಿಗೂ ನೆರವು ನೀಡುತ್ತಾ, ಸಮಾಜಸೇವೆಗೆ ತನ್ನನ್ನು ಅರ್ಪಿಸಿಕೊಂಡವರು. ಅವರಿಗೆ ಇದಕ್ಕಿಂತ ದೊಡ್ಡ ಸ್ಥಾನಮಾನ ಬರಬೇಕಿತ್ತು. ಈಗ ದೊರೆತಿರುವುದನ್ನು ಸ್ವಾಗತಿಸುತ್ತಾ, ಮುಂದೆ ಎಂ.ಎಲ್.ಸಿ.ಯಾಗಲಿ ಎಂದು ಹಾರೈಸುತ್ತೇನೆ ” ಎಂದರು.
















ಟಿ.ಎಂ.ಶಹೀದ್ ರನ್ನು ಸಮಿತಿಯ ಪರವಾಗಿ ಸನ್ಮಾನಿಸಿದ ಎನ್ನೆಂಸಿ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ವಿ.ದಾಮೋದರ ಗೌಡ, ಎನ್ನೆಂಸಿಯ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಬಾಲಚಂದ್ರ ಗೌಡ,ಅರಂತೋಡು ಎನ್ನೆಂಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ , ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಸಭಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ ಶುಭಹಾರೈಸಿದರು.
ಅಭಿನಂದನೆ ಸ್ವೀಕರಿಸಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಮಾತನಾಡಿದರು.
ಸಭಾ ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ , ಮುಖಂಡರುಗಳಾದ ಡಾ.ರಘು , ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ , ತಾಲೂಕು ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್. ರೈ , ನ.ಪಂ. ಮಾಜಿ ಅಧ್ಯಕ್ಷ ಎಸ್ ಸಂಶುದ್ದೀನ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ , ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ಎ.ಪಿ.ಎಂ.ಸಿ. ಕಾರ್ಯದರ್ಶಿ ರವೀಂದ್ರ , ಪ್ರಜಾಧ್ವನಿ ಕರ್ನಾಟಕ ಅಧ್ಯಕ್ಷ ಅಶೋಕ್ ಎಡಮಲೆ , ಗೌಡರ ಯುವಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಗಾಂಧಿನಗರ ಮಸೀದಿ ಜಮಾಅತ್ ಅಧ್ಯಕ್ಷ ಹಾಜಿ ಕೆ.ಎಂ.ಎಸ್.ಮಹಮ್ಮದ್, ಮಕ್ಕಳ ಕಲ್ಯಾಣ ಜಿಲ್ಲಾ ಸಮಿತಿ ಸದಸ್ಯ ನ್ಯಾಯವಾದಿ ಜೆ.ಎನ್.ಅಬೂಬಕ್ಕರ್ ಅಡ್ಕಾರ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ , ಎ.ಪಿ.ಎಂ.ಸಿ. ಮಾಜಿ ಸದಸ್ಯ ಆದಂ ಹಾಜಿ ಕಮ್ಮಾಡಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ ಹಾಗೂ ನಿಝಾರ್ ಕಾರ್ಯಕ್ರಮ ನಿರೂಪಿಸಿದರು. ವೆಂಕಟ್ರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ವಂದಿಸಿದರು. ಸಿದ್ದಿಕ್ ಕೊಕ್ಕೋ, ಶರೀಫ್ ಕಂಠಿ, ಜಿ.ಕೆ.ಹಮೀದ್, ಇತರರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯದ ಹತ್ತು ಹಲವಾರು ಸಂಘ ಸಂಸ್ಥೆಗಳ ಮುಖಂಡರು ಶಹೀದ್ ರವರನ್ನು ಶಾಲು ಹಾರ ಹಾಗೂ ಹೂಗುಚ್ಛವನ್ನು ನೀಡಿ ಅಭಿನಂದಿಸಿದರು.










