ಎ.ಟಿ.ಎಂ.ಉದ್ಘಾಟನೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಗುತ್ತಿಗಾರು ಶಾಖೆಯು ಅ. 13 ರಂದು ಸ್ಥಳಾಂತರಗೊಂಡು ಗುತ್ತಿಗಾರು ಪೇಟೆಯ ರಾಘವೇಂದ್ರ ಕಾಂಪ್ಲೆಕ್ಸ್’ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲೆ ಕೆಳ ಮಹಡಿಯಲ್ಲಿ ಡಿಸಿಸಿ ಬ್ಯಾಂಕ್ ನ ಎ.ಟಿ.ಎಂ ಕೂಡ ಉದ್ಘಾಟನೆಗೊಳ್ಳಲಿದೆ.















ಸಹಕಾರ ರತ್ನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ
ಡಾ| ಎಂ.ಎನ್. ರಾಜೇಂದ್ರ ಕುಮಾರ್ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ.
ಬ್ಯಾಂಕ್ ನ ಎ.ಟಿ.ಎಂ ನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ,
ಗುತ್ತಿಗಾರು ಪ್ರಾ. ಕೃ. ಪ. ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ , ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ
ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಘವೇಂದ್ರ ಕಾಂಪ್ಲೆಕ್ಸ್ ಕಟ್ಟಡ ಮಾಲಕ ಅನಿಲ್ ಕುಮಾರ್ ಇರಲಿದ್ದಾರೆ.










