ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಸಂಪರ್ಕ ರಸ್ತೆಗೆ ಅನುದಾನ ನೀಡಲು ಸಮಾಜ ಕಲ್ಯಾಣ ಸಚಿವರಿಗೆ ಸಚಿನ್ ರಾಜ್ ಶೆಟ್ಟಿ ಮನವಿ

0

ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ ವಾರ್ಡ್ ನ 5 ಪರಿಶಿಷ್ಟ ಜಾತಿ ಕುಟುಂಬ ಗಳ ಸಂಪರ್ಕ ರಸ್ತೆಗೆ ಒಟ್ಟು 50 ಲಕ್ಷ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಎಚ್ ಸಿ ಮಹದೇವಪ್ಪ ಅವರಿಗೆ ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ ಮನವಿ ನೀಡಿದ್ದಾರೆ.

ಸಚಿವರು ಮಡಿಕೇರಿ ಖಾಸಗಿ ಕಾರ್ಯಕ್ರಮ ಒಂದಕ್ಕೆ ಬಂದಾಗ ಈ ಮನವಿಯನ್ನು ನೀಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.