















ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಸುಳ್ಯ , ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ, ಪಯಸ್ವಿನಿ ಸ್ತ್ರೀ ಶಕ್ತಿ ವಿದೋದ್ದೇಶ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಪೋಶನ್ ಮಾಸಾಚರಣೆ 25 ಕಾರ್ಯಕ್ರಮವನ್ನು ಅ.13 ರಂದು ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯರವರು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಳಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಇಲಾಖೆಯ ಪ್ರತಿಯೊಂದು ಕಾರ್ಯಕ್ರಮಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಪ್ರಶಂಸಿಸಿದರು. ಪೌಷ್ಠಿಕ ಆಹಾರ ವಸ್ತುಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ದೇಶಿಸಿ ಇಂತಹ ಪೌಷ್ಠಿಕ ಆಹಾರಗಳನ್ನು ತಯಾರಿಸಿ ಮನೆ ಮನೆಗಳಲ್ಲಿ ಸೇವಿಸುವುದರಿಂದ ನಮ್ಮ ಸಂಸ್ಕೃತಿ ಎಲ್ಲಾ ಪರಂಪರೆಗೂ ತಲುಪಿದಂತಾಗುತ್ತದೆ ಎಂದು ಹೇಳಿದರು, ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಾಪ.ಕೆ.ಎಂ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷರಾದ ಶ್ರೀಮತಿ ಚಿತ್ರಾವತಿ ದೇರಾಜೆ, ಪಯಸ್ವಿನಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ್ ಮಡಪ್ಪಾಡಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಪ್ರಮೀಳಾ, ಸಂಪನ್ಮೂಲ ವ್ಯಕ್ತಿಗಳಾದ ಡಾ ಪೂಜಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಯವರಾದ ಶ್ರೀಮತಿ ಪ್ರಮೀಳಾ ಮತ್ತು ಡಾ.ಪೂಜಾ ಶ್ರೀ ಯವರು ಆರೋಗ್ಯ ಮತ್ತು ಪೌಷ್ಠಿಕತೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪುಷ್ಟಿಯಿಂದ ಮಾಡಿದ ಖಾದ್ಯಗಳು, ಮಿಲ್ಲೆಟ್ ಲಡ್ಡು ನಿಂದ ಮಾಡಿದ ಖಾದ್ಯಗಳು ಮತ್ತು ಇತರೆ ಆಹಾರ ಪದಾರ್ಥಗಳಿಂದ ಮಾಡಿದ ಖಾದ್ಯಗಳನ್ನು ಮಹಿಳೆಯರು ತಯಾರಿಸಿ ತಂದಿದ್ದು ಪ್ರದ ರ್ಶಿಸಲಾಯಿತು. ಶಾಸಕರ ಉಪಸ್ಥಿತಿಯಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ, ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ, ಉತ್ತಮ ಸ್ತ್ರೀಶಕ್ತಿ ಗುಂಪಿಗೆ ಗೌರವಾರ್ಪಣೆ, ಕಿಶೋರಿ ಸಂಘದ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಲ್ಮಡ್ಕ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸ್ವಾಗತ ನೃತ್ಯ ಮತ್ತು ಯಕ್ಷಗಾನದ ನೃತ್ಯಪ್ರದರ್ಶನ ಎಲ್ಲರನ್ನು ಮನರಂಜಿಸಲಾಯಿತು.













