ಸುಳ್ಯ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಸರಕಾರ ಉಡುಪಿ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ರಜತಾದ್ರಿ ಮಣಿಪಾಲ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಕಾರ್ಕಳ ಇದರ ಸಹಯೋಗದಲ್ಲಿ ೧೪ ಮತ್ತು ೧೭ ವಯೋಮಾನದ ಬಾಲಕ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯು ಅ. ೯ ಮತ್ತು ೧೦ ರಂದು ಕಾರ್ಕಳದಲ್ಲಿ ನಡೆಯಿತು.

೧೭ ವಯೋಮಾನದ ಬಾಲಕರ ಬಾಲಕರ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತನುಷ್ ಎಂ ಹೆಚ್ ಪ್ರಥಮ ಸ್ಥಾನ ಹಾಗೂ ಆರ್ಟಿಸ್ಟಿಕ್ ಸಿಂಗಲ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಹರೀಶ್ ಮೋಂಟಡ್ಕ ಹಾಗೂ ಭವಾನಿ ದಂಪತಿಗಳ ಪುತ್ರ.

೧೪ ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಹಾರ್ದಿಕ ಕೆ.ಕೆ ಇವರು ಆರ್ಟಿಸ್ಟಿಕ್ ಸಿಂಗಲ್ ವಿಭಾಗದಲ್ಲಿ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಪೇರ್ ಪ್ರಥಮ ಸ್ಥಾನ ಹಾಗೂ ರಿದಮಿಕ್ ಪೇರ್ ಪ್ರಥಮ ಸ್ಥಾನ ಪಡೆದಿರುತ್ತಾರೆ ಇವರು ಕೃಷ್ಣಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ. ಇವರುಗಳು ಮಂಡ್ಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.

ಯೋಗ ಶಿಕ್ಷಕ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾಸಂತೋಷ್ ಮಾರ್ಗದರ್ಶನ ನೀಡಿರುತ್ತಾರೆ.