ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀಮತಿ ಶಾಲೆಟ್ ಪಿಂಟೋರವರ ಪದಗ್ರಹಣ ಸಮಾರಂಭದಲ್ಲಿ ಟಿ. ಎಂ ಶಹೀದ್ ತೆಕ್ಕಿಲ್ ಭಾಗಿ

0

ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಮತ್ತು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಎಂ ಶಹೀದ್ ತೆಕ್ಕಿಲ್ ಇವರು ಅ.೧೫ರಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಮತಿ ಶಾಲೆಟ್ ಪಿಂಟೋರವರ ಪದಗ್ರಹಣ ಸಮಾರಂಭದಲ್ಲಿ ಮತ್ತು ನೂತನ ಕಛೇರಿ ಉದ್ಘಾಟನೆಯಲ್ಲಿ ಭಾಗವಹಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾ, ಮಾಜಿ ಸಚಿವರಾದ ಅಭಯಚಂದ್ರಜೈನ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹರೀಶ್ ಕುಮಾರ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎ ಗಫೂರ್, ಗಾಣಿಗ ನಿಗಮದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಮತ್ತು ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ರವಿಶಂಕರ್ ಶೆಟ್ಟಿ ಹಾಗೂ ಸುಮಂತ್ ರಾವ್ ಉಪಸ್ಥಿತರಿದ್ದರು.