ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಅ. 15ರಂದು ಆಚರಿಸಲಾಯಿತು.
ಎಒಎಲ್ಇ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.















ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಸಲಹೆಗಾರರಾದ ಮನೋವೈದ್ಯ ಡಾ.ಟಿ. ಸುಧಾಕರ ಭಟ್ ಮಾನಸಿಕ ಆರೋಗ್ಯದ ಕುರಿತು ಉಪನ್ಯಾಸ ನೀಡಿದರು. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರು ಡಾ. ಪೂನಂ ಎಂ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರಶ್ಮಿ ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾನಸಿಕ ಆರೋಗ್ಯದ ವಿಚಾರವಾಗಿ ಮಾಹಿತಿ ನೀಡಿದರು. ಡಾ ಸುಪ್ರಿಯಾ ಮತ್ತು ಡಾ. ನವಿತ ಸಂಯೋಜಿಸಿದ ಮಾನಸಿಕ ಆರೋಗ್ಯ ಜಾಗೃತಿ ಕುರಿತಾದ ಪ್ರಹಸನ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡಿತು. ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಡಾ. ಅಮೃತಾ ಅಜಯ್ ಸ್ವಾಗತಿಸಿ, ಅನುಶ್ರಿ ವಂದಿಸಿದರು. ಮನಶಾಸ್ತ್ರಜ್ಞರಾದ ನಮ್ರತಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ. ಅಭಿಜ್ಞಾ ಮತ್ತು ಡಾ. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










