















ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇಲ್ಲಿ ಅ. 14 ರಂದು ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜೆ ಸಿ ಐ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಪ್ರಾಂಶುಪಾಲರಾದ ಡಾ. ಬಾಲಸುಬ್ರಮಣ್ಯ ಪಿ. ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಡಾ. ಸುಪ್ರಿಯಾ ಪಿ. ಆರ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಕು. ರಜತ ಸ್ವಾಗತಿಸಿ ಕು. ಪೃಥ್ವಿ ವಂದಿಸಿದರು. ಕು. ತೃಪ್ತಿ ಕಾರ್ಯಕ್ರಮ ನಿರೂಪಿಸಿದರು.











