ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ ಇದರ ವತಿಯಿಂದ ಜಟ್ಟಿಪಳ್ಳದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿ ಅಗಲಿದ ಶ್ರೀಮತಿ ಕೆ.ಎಂ.ಭವಾನಿ ಯವರಿಗೆ ಜಟ್ಟಿಪಳ್ಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.















ಶ್ರೀಮತಿ ಕೆ.ಎಂ.ಭವಾನಿ ಯವರು ಮುಖ್ಯೋಪಾಧ್ಯಾಯರಾಗಿ ಜಟ್ಟಿಪಳ್ಳದಲ್ಲಿ ಎಲ್ಲಾ ಸಂಘ-ಸಂಸ್ಥೆಗಳೊಂದಿಗೆ ಮತ್ತು ಶಾಲಾ ಮಕ್ಕಳು ಹಾಗೂ ಪೋಷಕರೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳುತ್ತಿದ್ದು ಮತ್ತು ಅವರು ಅತ್ಯುತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಇವರನ್ನು ಕಳೆದುಕೊಂಡ ನೋವು ನಮಗಾಗಿದೆ ಎಂದೂ ಮಾನಸ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ರೀಮತಿ ಚಂದ್ರಾಕ್ಷಿ ಜೆ. ರೈ, ಶೀರಾಮ ಭಜನಾ ಸೇವಾ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಎಂ.ಆರ್., ಕಪಿಲ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ರಘುನಾಥ ಜಟ್ಟಿಪಳ್ಳ, ನಗರ ಪಂಚಾಯತ್ ಮಾಜಿ ಸದಸ್ಯರಾದ ರಮಾನಂದ ರೈ ಜಟ್ಟಿಪಳ್ಳ, ನ್ಯಾಯವಾದಿ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಚಿತ್ರಲೇಖ ಸ್ವಾಗತಿಸಿ, ಕಾರಕ್ರಮ ನಿರೂಪಿಸಿದರು. ಮಹಿಳಾ ಮಂಡಲದ ಕೋತಾಧಿಕಾರಿ ಸವಿತಾ ಲಕ್ಷ್ಮಣ ಆಚಾರ್ಯ, ಜತೆ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಮಹೇಶ್ ಹಾಗೂ ಮಹಿಳಾ ಮಂಡಲದ ಪೂರ್ವ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.










