














ಅ. ೧೪ರಂದು ಎಂಆರ್‌ಪಿಎಲ್ ಹಾಗೂ ಮನೇಲ್ ಶ್ರೀನಿವಾಸ್ ನಾಯಕ್ ಇನ್ಸಿಟ್ಯೂಟ್ ಆಫ್ ಮೇನೇಜ್ ಮೆಂಟ್ ಇದರ ಆಶ್ರಯದಲ್ಲಿ ಜಾಗರೂಕತೆ ನಮ್ಮೆಲ್ಲರ ಹೊಣೆಗಾರಿಕೆ ಎಂಬ ವಿಷಯದ ಅಡಿಯಲ್ಲಿ ನಡೆದ ಬೀದಿನಾಟಕ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










