














ಶಾಲಾ ಶಿಕ್ಷಣ ಇಲಾಖೆ (ಪ.ಪೂ )ಮತ್ತು ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಪ್ರ ಕಲಾ ವಿಭಾಗದ ವಿದ್ಯಾರ್ಥಿ ಹೇಮಂತ್ ಎಂ.ಕೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ. ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ನಾಗರಾಜ್ ನಾಯ್ಕ್ ಭಟ್ಕಳ ತರಬೇತಿ ನೀಡುತ್ತಿದ್ದಾರೆ. ಕ್ರೀಡಾಪಟುವನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.










