ಸುಳ್ಯ ಶಾಂತಿನಗರ ಬೆಟ್ಟಂಪಾಡಿ ನಿವಾಸಿ ಆಟೋ ಚಾಲಕ ಜಬ್ಬಾರ್ ಅಂದಾಜು 35 ವರ್ಷ ಎಂಬುವವರು ಅಕ್ಟೋಬರ್ 17 ರಂದು ರಾತ್ರಿ ನಿಧನರಾಗಿದ್ದಾರೆ.















ಇವರು ಕಳೆದ ಕೆಲವು ತಿಂಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮನೆಗೆ ಬಂದಿದ್ದು ಮತ್ತೆ ಆಟೋ ಚಾಲಕನಾಗಿ ದುಡಿಯುತ್ತಿದ್ದರು.
ಇದೀಗ ಇವರ ಸಾವು ಅನುಮಾನಕ್ಕೆ ಕಾರಣವಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಮೃತರು ತಾಯಿ, ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.



