ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಕೆ.ವಿ.ಜಿ.ಸಮುದಾಯ ಭವನ ಅಮರಶ್ರೀಭಾಗ್ ನಲ್ಲಿ ಇಂದು ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಡಾ.ರೇಣುಕಾ ಪ್ರಸಾದ್ ಅವರು ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿ ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.
















ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ ಬಿಇದರ ಪ್ರಧಾನ ಕಾರ್ಯದರ್ಶಿ ಡಾ.ಜ್ಯೋತಿ ಆರ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್ ಮನ್ಮಥ, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಪ್ರಸ್ತುತ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾ ಮನಮೋಹನ್ , ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷರಾದ ಪಿ.ಸಿ.ಜಯರಾಮ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸುಳ್ಯ, ಪುತ್ತೂರು, ಕಡಬ, ವಿಟ್ಲ ಭಾಗದ ಸಮಾಜದ ಪ್ರಮುಖರು ಕೆ.ವಿ.ಜಿ.ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದ ಈ ಕಾರ್ಯ ಕ್ರಮಕ್ಕೆ ಎ.ಓ.ಎಲ್.ಇ.(ರಿ) ಕಮಿಟಿ ಬಿ ಇದರ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ಸ್ವಾಗತಿಸಿ, ಕೆ.ವಿ.ಜಿ.ಐ.ಟಿ.ಐ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ ರಥ ಮೆರವಣಿಗೆಯ ಮಾಹಿತಿ ನೀಡಿದರು. ಕೆ.ವಿ.ಜಿ.ಎ.ಜೆ.ಪಿ.ಯು.ಸಿ ಪ್ರಾಂಶುಪಾಲೆ ಡಾ.ಯಶೊಧ ರಾಮಚಂದ್ರ ವಂದಿಸಿ ಕೆ.ವಿ.ಜಿ ಡೆಂಟಲ್ ಕಾಲೇಜು ಆಡಳಿತ ಅಧಿಕಾರಿ ಮಾಧವ ಬಿ.ಟಿ. ಮತ್ತು ಕೆ.ವಿ.ಜಿ. ಪಾಲಿಟೆಕ್ನಿಕ್ ಉದ್ಯೋಗಿ ವಸಂತ ಕಿರಿಭಾಗ ಸಹಕರಿಸಿದರು.










