“ಪಂಚಸಪ್ತತಿ – 2025” : ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮ

0

“ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮವನ್ನು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮವಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಸುಳ್ಯದ ಆವರಣವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ , ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೇಯಸ್ಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿ ವಿನ್ಯಾಸ್ ಕೊಚ್ಚಿ , ಕೋಶಾಧಿಕಾರಿ ದಯಾನಂದ ಕನ್ನಡ್ಕ, ಪೂರ್ವಾಧ್ಯಕ್ಷರಾದ ಮಾಧವ ಎರ್ದಡ್ಕ ಮತ್ತು ಪದಾಧಿಕಾರಿಗಳು, ಸದಸ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .