
ವಿಶ್ವ ಯುವಕ ಮಂಡಲರಿ ಬಾಳುಗೋಡು ಇದರ ವತಿಯಿಂದ ನಿವೃತ್ತ ಯೋಧ ದಿ. ಧನಂಜಯ ಬಾಳುಗೋಡು ವೇದಿಕೆಯಲ್ಲಿ ದೀಪಾವಳಿ ಪ್ರಯುಕ್ತ ಕ್ರೀಡಾಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅಕ್ಟೋಬರ್ ೧೯ರಂದು ಬೆಟ್ಟುಮಕ್ಕಿ ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ವಿಶ್ವಯುವಕ ಮಂಡಲದ ಅಧ್ಯಕ್ಷ ರಾಜೇಶ್ ಕಿರಿಭಾಗ ವಹಿಸಿದ್ದರು. ಸನ್ಮಾನ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರು ನೆರವೇರಿಸಿ ಶುಭ ಹಾರೈಸಿದರು.









ವೇದಿಕೆಯಲ್ಲಿ ಭಾಜಪ ಮಾಜಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು.










