ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಿಗೆ ಅಭಿನಂದನೆ

0

ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಶ್ವಾಸ್ ಕುಮಾರ್ ದಾಸ್ ಇವರನ್ನು ಮಂಗಳೂರು ಚಿಲಿಂಬಿ ಸಾಯಿ ನಿವಾಸದಲ್ಲಿ ಅ. 21ರಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷರಾದ ವೆಂಕಟ್ರಮಣ ಬೇರ್ಪಡ್ಕ, ಕಾರ್ಯದರ್ಶಿ ಸಂಜಯ್ ನೆಟ್ಟಾರು, ಪೂರ್ವಾಧ್ಯಕ್ಷ ಚಂದ್ರಶೇಖರ ಉದ್ದತoತಡ್ಕ, ಕಾರ್ಯಕಾರಿ ಸದಸ್ಯ ಪ್ರವೀಣ್ ಕುಮಾರ್ ಜಯನಗರ ಮತ್ತು ಸದಸ್ಯರುಗಳಾದ ಕೇಶವ್ ಮೊರಂಗಲ್ಲು, ನಾರಾಯಣ ಅಟ್ಲೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.